Breaking News

ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ತಿಂಗಳಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಯಾರು ಇರುತ್ತಾರೊ‌ ಅವರ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ ಎದುರಿಸುವುದು ಸಾಮಾನ್ಯ. ಅಮಿತ್ ಶಾ ಅವರು ಇದೇ ಮಾತು ಹೇಳಿದ್ದಾರೆ. ಇದರಲ್ಲಿ ‌ವಿಶೇಷವೇನೂ ಇಲ್ಲ ಎಂದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ