Breaking News

ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ

Spread the love

ಬೆಂಗಳೂರು: ಸರ್ಕಾರಕ್ಕೆ ಮುಜುಗರವಾಗಬಹುದಾದ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೆಲ ಸಚಿವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದ ‘ಅಷ್ಟೊತ್ತಿನಲ್ಲಿ ಹೆಣ್ಣುಮಕ್ಕಳು ಯಾಕೆ ಅಲ್ಲಿಗೆ ಹೋಗಬೇಕಿತ್ತು’ ಎಂಬ ಮಾತನ್ನು ನೆನಪಿಸಿದ್ದಾರೆ. ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆ ಮತ್ತು ಗೃಹ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರದಲ್ಲಿ ಹೇಳಿಕೆ ಕೊಡದಿರುವಂತೆ ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಇತರ ಯಾವ ಸಚಿವರೂ ಬೇರೆ ಸಚಿವರು ಯಾರೂ ವಿವಾದವಾಗುವಂತೆ ಮಾತಾಡುವಂತಿಲ್ಲ. ಇನ್ನು ಮುಂದೆ ಮಾಧ್ಯಮಗಳಿಗೆ ಯಾರೇ ಹೇಳಿಕೆ ಕೊಡುವಾಗ ಎಚ್ಚರ ವಹಿಸಬೇಕು ಎಂದು ಅವರು ಖಡಕ್ ಸೂಚನೆ ನೀಡಿದ್ದಾರೆ.

Crop Relief Fund: ಬೆಳೆಹಾನಿಯಾದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ
ಕರ್ನಾಟಕದಲ್ಲಿ ಮಳೆ, ಪ್ರವಾಹದಿಂದಾಗಿ ಅಪಾರ ಹಾನಿಯಾಗಿರುವುದರಿಂದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದರು. ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಪರವಾಗಿ ಆಗಮಿಸಿದ ತಂಡ ಭೇಟಿ ನೀಡಲಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ನೀಡುವ ವಿಶ್ವಾಸವಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರವಾಹದಿಂದ ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಿಗೆ ಕೇಂದ್ರದ ತಂಡ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಲಿದೆ. ಕಳೆದ ಬಾರಿ ತೌಕ್ತೆ ಚಂಡಮಾರುತದಿಂದ ನಷ್ಟ ಉಂಟಾದಾಗಲೂ ಇದೇ ತಂಡ ಆಗಮಿಸಿ ಪರಿಹಾರ ಒದಗಿಸಿತ್ತು. ಈಬಾರಿಯೂ ಸಹ ಕೇಂದ್ರ ಸರ್ಕಾರದಿಂದ ಉತ್ತಮ ಪರಿಹಾರ ದೊರೆಯುವ ಭರವಸೆ ಇದೆ. ಈಬಾರಿ ಪ್ರವಾಹದಿಂದ 5,619 ಕೋಟಿ ನಷ್ಟವಾಗಿದೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ