Breaking News

ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಶೋಕಾಸ್​ ನೋಟಿಸ್ ಜಾರಿ ಮಾಡಲಾಗಿದೆ.

ನಿನ್ನೆ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ್ದರು. ಈ ಕುರಿತು ನ್ಯೂಸ್​ಫಸ್ಟ್​ ವರದಿ ಬಿತ್ತರಿಸಿತ್ತು. ಘಟನೆ ಕುರಿತು ಶಾಸಕ ಮಹಾಂತೇಶ ದೊಡ್ಡಗೌಡರ​​ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುವದರ ಜೊತೆಗೆ ಪೋಲಿಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಸದ್ಯ ಬೈಲಹೊಂಗಲದ ಶಾಸಕನ ಮನೆಗೆ ತೆರಳಿ ಪುಷ್ಪವೃಷ್ಠಿ ಮಾಡಿದ್ದ ಪೋಲಿಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಲಕ್ಷ್ಮಣ‌ ನಿಂಬರಗಿ ಶೋಕಾಸ್​ ನೋಟಿಸ್​ ಜಾರಿ ಮಾಡಿದ್ದಾರೆ. ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಬೈಲಹೊಂಗಲ ಠಾಣೆ ಸಿಪಿಐ ಯು.ಬಿ. ಸಾತೇನಹಳ್ಳಿ, ನೇಸರ್ಗಿ ಠಾಣೆ ಸಿಪಿಐ ಯಲ್ಲಪ್ಪ ಶೀಗಿಹಳ್ಳಿ, ಗುಪ್ತಚರ ಇಲಾಖೆಯ ವಿಶ್ವನಾಥ ಮಲ್ಲನ್ನವರ, ಪೇದೆ ಮಂಜುನಾಥಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ