Breaking News

ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದು ಸಾಬೀತು; ಕಾಂಗ್ರೆಸ್ ಒಳಜಗಳ ಬಯಲಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ್ ವಾಗ್ದಾಳಿ

Spread the love

ಬೆಂಗಳೂರು: ಬಿ ಎಸ್ ವೈ ಮಾರ್ಗದರ್ಶನದಲ್ಲಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂಬುದು ಮತ್ತೊಮ್ಮೆ ಖಚಿತವಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂಬುದು ಮತ್ತೊಮ್ಮೆ ಖಚಿತವಾಗಿದೆ. ಕಾಂಗ್ರೆಸ್ ಒಳಜಗಳ ಸಾಬೀತಾಗಿದ್ದು, ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದನ್ನು ತೋರಿಸಿದ್ದಾರೆ. ಚುನಾವಣಾ ಅಖಾಡಕ್ಕೆ ಪ್ರಚಾರಕ್ಕೆ ಕೂಡ ಸಿದ್ದರಾಮಯ್ಯ ಬಾರದಿರಲು ಕಾರಣ ಕೂಡ ಇದೆ ಆಗಿದೆ ಎಂದು ಟೀಕಿಸಿದರು.

ಬಿಜೆಪಿ ಆಡಳಿತ ಮೆಚ್ಚಿ ಬೆಳಗಾವಿಯಲ್ಲಿ ಜನರು ಪಕ್ಷಕ್ಕೆ ಗೆಲುವು ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಕಲಬುರ್ಗಿಯಲ್ಲಿಯೂ ಉತ್ತಮ ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಬಿಜೆಪಿ ಅಲೆ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡುತ್ತಿದ್ದರು. ಆದರೆ ಬಿಜೆಪಿ ಪರ ಇದ್ದೇವೆ ಎಂಬುದನ್ನು ಜನರು ಸ್ಪಷ್ಟ ಸಂದೇಶದ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ