Breaking News

ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸ್ತಿದ್ದಾರೆ – ಸಾರ್ವಜನಿಕರ ಆಕ್ರೋಶ

Spread the love

ಚಿಕ್ಕೋಡಿ: ರಣ ಭೀಕರ ಪ್ರವಾಹ ಬಂದು ಎರಡು ತಿಂಗಳು ಕಳೆದರೂ ನದಿ ತೀರದ ಸಂತ್ರಸ್ತರ ಸಂಕಷ್ಟ ಮುಂದುವರೆದಿದೆ. ರೈತರು ನಾಶವಾದ ಬೆಳೆ ತೆಗೆದು ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ.

ಭೀಕರ ಪ್ರವಾಹದಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ಕೊಚ್ಚಿ ಹೋಗಿ ನದಿ ತೀರದ ರೈತರು ಕಂಗಾಲಾಗಿದ್ದಾರೆ. ಈ ಪ್ರವಾಹಕ್ಕೆ ಕಬ್ಬು, ಸೊಯಾಬೀನ್, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಆದರೂ ಸಹ ಸರ್ಕಾರ ಮಾತ್ರ ರೈತರ ಸಹಾಯಕ್ಕೆ ಇದೂವರೆಗೂ ಮುಂದಾಗಿಲ್ಲ. ತಮ್ಮ ಜಮೀನುಗಳನ್ನು ಸ್ವಚ್ಛಗೊಳಿಸಿ ಬೇರೆ ಹೊಸ ಬೆಳೆ ಬಿತ್ತನೆ ಮಾಡಲು ರೈತರು ಹಣ ಇಲ್ಲದೆ ಪರದಾಡುತ್ತಿದ್ದಾರೆ.

ರೈತರಿಗೆ ಇಷ್ಟೆಲ್ಲಾ ಕಷ್ಟಗಳಿದ್ದರೂ, ಸರ್ಕಾರ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಪರಿಹಾರ ಸಿಗದೇ ರೈತರು ಸರ್ವೆ ಹೆಸರಿನಲ್ಲಿ ಕಾಲ ಕಳೆಯುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೇಗ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ