ಬೆಂಗಳೂರು :ರಾಜ್ಯದ ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ.
ಅವರಿಗೆ ಶೌಚಾಲಯ, ಹಕ್ಕು ಪತ್ರ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ. ಇಲಾಖೆಯಲ್ಲಿ ಆಗುತ್ತಿರುವ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಹಾಗೂ ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನನ್ನ ಗುರಿ. ಆರ್ಥಿಕ ಕಾರಣದಿಂದ ಕೆಲ ಕಾಲ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಈ ಕುರಿತು ಸಿಎಂ ಬೊಮ್ಮಾಯಿ ಸಭೆ ಮಾಡಿ ವಿಶ್ವಾಸ ಮೂಡಿಸಿ, ಒಟ್ಟಿಗೆ ಕೆಲಸ ಮಾಡ್ತಿದ್ದಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.