ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Laxmi News 24×7