Breaking News

ಪ್ರತಿಭಟನಾಕಾರರ ಆಕ್ರೋಶಕ್ಕೆ ‘ಮಣಿದ’ ಬಿಬಿಎಂಪಿ: ಬೆಂಗಳೂರಿನಲ್ಲಿ ವಾರ್ಡ್ ಗೆ 1 ಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆಗೆ ಅನುಮತಿ

Spread the love

ಬೆಂಗಳೂರು : ನಾಳೆ ಗಣೇಶ ಚತುರ್ಥಿಗೆ ನಾಡು ಸಜ್ಜಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಬಿಬಿಎಂಪಿ ಸಡಿಲಗೊಳಿಸಿದೆ. ಬೇಡಿಕೆ ಬಂದರೆ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ.

 

ಪ್ರತಿಭಟನಾಕಾರರ ಪ್ರತಿಭಟನೆಗೆ ಮಣಿದ ಬಿಬಿಎಂಪಿ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದೆ. ಈ ಕುರಿತಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಸ್ಪಷ್ಟಪಡಿಸಿದ್ದಾರೆ. ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಬಿಬಿಎಂಪಿ ಕಳೆದ ಮೂರು ದಿನಗಳ ಹಿಂದೆ ಮಾರ್ಗಸೂಚಿ ಪ್ರಕಟಿಸಿತ್ತು. ಇದರಲ್ಲಿ ಬೆಂಗಳೂರಿನಲ್ಲಿ ಗಣೇಶ ಪ್ರತಿಷ್ಠಾಪನೆಗೆ ಮೂರು ದಿನ ಮಾತ್ರ ಅವಕಾಶ ನೀಡಲಾಗಿತ್ತು. ಅಲ್ಲದೇ, ವಾರ್ಡ್ ಗೆ ಒಂದೇ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿತ್ತು. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿಗೆ ಮುತ್ತಿಗೆ ಹಾಕಿ ನಿರ್ಬಂಧ ಸರಿಯಲ್ಲ. ಬಿಬಿಎಂಪಿ ಏನೇ ನಿಯಮ ವಿಧಿಸಿದರೂ ಸಾಂಪ್ರದಾಯಿಕವಾಗಿಯೇ ಗಣೇಶೋತ್ಸವ ಆಚರಿಸುವುದಾಗಿ ಎಚ್ಚರಿಕೆ ನೀಡಿದ್ದವು . ಮತ್ತೊಂದೆಡೆ ಗಣೇಶೋತ್ಸವ ಸಮಿತಿ ಕಾರ್ಯಕರ್ತರು ಹಾಗೂ ಮೂರ್ತಿ ತಯಾರಕರು ಪ್ರತಿಭಟನೆ ಕೈಗೊಂಡಿದ್ದರು…


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ