Breaking News

ಜೋಶಿಗೆ ಉತ್ತರಾಖಂಡ ಹೊಣೆ

Spread the love

ಹೊಸದಿಲ್ಲಿ: ಮುಂದಿನ ವರ್ಷಾ ರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿರು ವ ಬಿಜೆಪಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ 8 ಮಂದಿ ಹಿರಿಯ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದೆ.

ಉತ್ತರ ಪ್ರದೇಶಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ನಿಯೋಜಿಸ ಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರಾದ ಅನುರಾಗ್‌ ಸಿಂಗ್‌ ಠಾಕೂರ್‌, ಅರ್ಜುನ್‌ ರಾಮ್‌ ಮೇಘ್ವಾಲ್‌, ಅನ್ನಪೂರ್ಣಾ ದೇವಿ, ಹರಿಯಾಣದ ಮಾಜಿ ಸಚಿವ ಕ್ಯಾ| ಅಭಿಮನ್ಯು, ರಾಜ್ಯಸಭಾ ಸದಸ್ಯರಾಗಿರುವ ಸರೋಜ್‌ ಪಾಂಡೆ, ವಿವೇಕ್‌ ಠಾಕೂರ್‌ ಸಹ ಉಸ್ತುವಾರಿಗಳಾಗಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿಗೆ ಉತ್ತರಾಖಂಡದ ಹೊಣೆ ನೀಡಲಾಗಿದೆ. ಅವರ ಜತೆಗೆ ಸಂಸದ ಲಾಕೆಟ್‌ ಚಟರ್ಜಿ, ವಕ್ತಾರ ಆರ್‌.ಪಿ. ಸಿಂಗ್‌ ಅವರನ್ನು ನೇಮಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ