ಮಧ್ಯವಯಸ್ಕ ಮಹಿಳೆಯೊಬ್ಬರನ್ನು ರಸ್ತೆ ಬದಿಯಲ್ಲಿದ್ದ ಟೆಂಪೊದೊಳಗೆ ಅತ್ಯಾಚಾರ ನಡೆಸಿ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರಹಿಂಸೆ ನೀಡಿದ ಆಘಾತಕಾರಿ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.
ಘಟನೆಯಲ್ಲಿ ಮಹಿಳೆ ಸ‍್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮೋಹನ್ ಚೌಹಾಣ್ (45) ನನ್ನು ಬಂಧಿಸಲಾಗಿದೆ.
ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾರೆ ಎಂದು ದೂರವಾಣಿ ಕರೆ ಸ್ವೀಕರಿಸಿದ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ ಮಹಿಳೆ ರಕ್ತಸ್ರಾವದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದು, ಕೂಡಲೇ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
Laxmi News 24×7