Breaking News

ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Spread the love

ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು ಒಟ್ಟು 35 ಸೈಕ್ಲಿಸ್ಟ್ ಗಳು ಭಾಗವಹಿಸಿದ್ದರು.

ಶಿವಳ್ಳಿ ಅವರು ರೈಡ್‌ಗೆ ಹೆಸರು ನೋಂದಾಯಿಸಿರಲಿಲ್ಲ. ಆದರೆ, ಸ್ನೇಹಿತರಿಗೆ ಬೀಳ್ಕೊಡುವ ಸಲುವಾಗಿ ಹುಬ್ಬಳ್ಳಿಯಿಂದ ಸೈಕಲ್ ಏರಿದ್ದರು. ಕೆಲ ಕಿ.ಮೀ. ದೂರ ಬಂದು ವಾಪಸ್ ಹೋಗುವುದಾಗಿ ತಿಳಿಸಿದ್ದರು. ಸೈಕಲ್ ಮೇಲಿನ ಪ್ರೀತಿಯಿಂದಾಗಿ ಶಿಗ್ಗಾವಿ ತನಕ‌ ನಮ್ಮ ಜೊತೆ ಬಂದರು. ಹಣ್ಣುಗಳನ್ನು ತಿಂದು ಕೆಲ ಹೊತ್ತು ಹರಟೆ ಹೊಡೆದರು. ಶಿಗ್ಗಾವಿಯಿಂದ ಮೂರು ಕಿ.ಮೀ. ಮುಂದೆ ಹೋದಾಗ ಅವರು ದಿಢೀರನೆ ಕುಸಿದು ಬಿದ್ದು‌ ಮೃತಪಟ್ಟರು.‌ ನಮ್ಮ ತಂಡದಲ್ಲಿದ್ದ ವೈದ್ಯರು ಪರೀಕ್ಷೆ ಮಾಡಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದು ಖಚಿತವಾಗಿದೆ ಎಂದು ಶಿವಳ್ಳಿ ಅವರ ಜೊತೆಯಿದ್ದ ಕೌಸ್ತುಬ್ ತಿಳಿಸಿದರು.ಶಿವಳ್ಳಿ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ