Breaking News

ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ

Spread the love

ಕಲಬುರಗಿ: ಸಾಲ ಬಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಹಾಂತಪ್ಪ ( 45 ) ಆತ್ಮಹತ್ಯೆ ಮಾಡಿಕೊಂಡ ರೈತ.

ಅಫಾಜಲ್ಪುರ್ ತಾಲ್ಲೂಕಿನ ದಿಕ್ಸಂಗಾ ಗ್ರಾಮದಲ್ಲಿ ತನ್ನ ಸ್ವಂತ ಹೊಲದಲ್ಲೇ ಕ್ರಿಮಿನಾಷಕ ಔಷಧ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಮಿನಾಷಕ ಔಷಧ ಸೇವನೆ ಮಾಡಿದ ಕೂಡಲೇ ರೈತನನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದೆ. ಈಗ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾರೆ.

ರೈತ ಬ್ಯಾಂಕ್ ಮಾತ್ರವಲ್ಲದೇ ಲಕ್ಷಾಂತರ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದರು. ಈ ಬಾರಿ ಬೆಳೆ ಹಾನಿಯಾದ ಕಾರಣ ಕಂಗಲಾಗಿ ಸಾವಿಗೆ ಶರಣಾಗಿದ್ದಾರೆ. ಈ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ