Breaking News

ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Spread the love

ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ದೇವಾಲಯಗಳನ್ನು ಕೆಡವಿದ್ದು ಖಂಡನೀಯ. ಇದು ಹಿಂದೂ ಭಾವನೆಗಳಿಗೆ ನೋವುಂಟುಮಾಡಿದೆ. ಇದಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯವನ್ನು ಪುನರ್ ನಿರ್ಮಾಣಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ನಂಜನಗೂಡಿನ ಹುಚ್ಚಗಣಿ ಗ್ರಾಮದ ಪುರಾತನ ದೇವಾಲಯವನ್ನು ಜಿಲ್ಲಾಡಳಿತ ನಿನ್ನೆ ನೆಲಸಮ ಮಾಡಿದ್ದು, ಸರ್ಕಾರದ ವಿರುದ್ಧ ಆರ್ ಎಸ್ ಎಸ್ ಕಾರ್ಯಕರ್ತರು ಕೂಡ ಕಿಡಿಕಾರಿದ್ದಾರೆ. ಹಿಂದೂ ಭಾವನೆಗಳಿಗೆ ಬಿಜೆಪಿ ಸರ್ಕಾರವೇ ಧಕ್ಕೆ ತರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ದೇವಾಲಯಗಳ ತೆರವು ಕ್ರಮಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ