ಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.