Breaking News

ವಿಜಯಪುರ : ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

Spread the love

ವಿಜಯಪುರ : ರೇವಣಸಿದ್ಧೇಶರ ಏತ ನೀರಾವರಿ ಸೇರಿದಂತೆ ಇಂಡಿ ಕ್ಷೇತ್ರದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆಗ್ರಹಿಸಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಬಳಿ ಜೆಡಿಎಸ್ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ- 50 ಸಂಚಾರ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಬಿ.ಡಿ.ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಗಾರರು ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಬೇಕು, ಇಂಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸೋ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು.

ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದ ಪರಿಣಾಮ ವಾಹನಗಳ ಸಂಚಾರ ಸ್ಥಗಿತಗೊಂಡು ಜನರು ಪರಾಡುವಂತಾಯಿತು.

ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸರು, ಜನರಿಗೆ ತೊಂದರೆ ಆಗದಂತೆ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡುವಂತೆ ಮನವೊಲಿಸುವ ಪ್ರಯತ್ನ ಮಾಡಿದರು.

ಪೊಲೀಸ್ ಮನವಿಗೆ ರೈತರು ಸ್ಪಂದಿಸಿದ್ದರಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಇಂಡಿ ತಹಶೀಲ್ಧಾರ್ ಚಿದಂಬರ ಕುಲಕರ್ಣಿ ಮೂಲಕ ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ