Breaking News

ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?

Spread the love

ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾಣಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಗುಜರಾತ್ ನ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್ ಅವರನ್ನು ಭಾನುವಾರ (ಸೆ.12) ಕಳುಹಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ದಿಢೀರ್ ರಾಜೀನಾಮೆ ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ ನಂತರ ರೂಪಾಣಿ ಅವರು ಶನಿವಾರ ಗಾಂಧಿನಗರದಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿ ಬಿಜೆಪಿ ಹಿರಿಯ ಮುಖಂಡರ ಜೊತೆ ಚರ್ಚೆ ನಡೆಸಿದ್ದರು.

ರೂಪಾಣಿ ರಾಜೀನಾಮೆ ಕುರಿತು ಘೋಷಿಸುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ (ಸಂಘಟನಾ) ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ಗುಜರಾತ್ ರಾಜ್ಯ ಘಟಕದ ಉಸ್ತುವಾರಿ ಭೂಪೇಂದ್ರ ಯಾದವ್ ಕೂಡಾ ಜತೆಗಿದ್ದರು.

ಭಾನುವಾರ ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲು 15 ತಿಂಗಳು ಬಾಕಿ ಇರುವಾಗಲೇ ರೂಪಾಣಿ ರಾಜೀನಾಮೆ ನೀಡಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ