Breaking News

ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ!

Spread the love

ಬಾಗಲಕೋಟೆ: ಒಂದು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ರಾಘಾಪುರದಲ್ಲಿ ನಡೆದಿದೆ.

ಹಂಸನೂರ ಗ್ರಾಮದ ಫಕೀರವ್ವ (26) ಎಂಬಾಕೆ ತನ್ನ ಒಂದು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದಿದ್ದಾರೆ. ಮಗು ಶಿವಾನಿ ಸಾವಿಗೀಡಾಗಿದ್ದು, ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಫಕೀರವ್ವಳಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರಿಸಿದ್ದಾರೆ.

ಫಕೀರವ್ವ ಹೆರಿಗೆಗಾಗಿ ತನ್ನ ಅಜ್ಜಿಯ ಊರು ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಗಂಡನ ಮನೆಯವರು ಆಕೆಯನ್ನು ಕರೆದುಕೊಂಡು ಹೋಗಲು ಬಂದಿದ್ದರು. ಆದರೆ, ಫಕೀರವ್ವ ದಿಢೀರನೇ ತನ್ನ ಅಜ್ಜಿಯ ಜಮೀನಿನಲ್ಲಿ ಇರುವ ಬಾವಿಗೆ ಮಗುವಿನ ಜತೆಗೆ ಹಾರಿದ್ದಾಳೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಫಟನೆಗೆ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ