ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಹೆಜ್ಜೆಯಿರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ ಪುನರ್ ವಿಂಗಡಣೆ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮಸೂದೆ ಮಂಡನೆ ಮಾಡಿದ್ದಾರೆ. ಆಯೋಗದ ಮೂಲಕ ತಾ.ಪಂ., ಜಿ.ಪಂ. ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ. ಮಸೂದೆ ಜಾರಿಯಾದ ತತ್‌ಕ್ಷಣ ತಾ.ಪಂ., ಜಿ.ಪಂ. ಕ್ಷೇತ್ರಗಳ ಈ ಹಿಂದಿನ ಎಲ್ಲ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆಗಳು ರದ್ದಾಗಲಿವೆ. ಜತೆಗೆ ತಾ.ಪಂ., ಜಿ.ಪಂ. ಕ್ಷೇತ್ರಗಳ ಮೀಸಲಾತಿಯೂ ರದ್ದಾಗಲಿದೆ. ಚುನಾವಣ ಆಯೋಗದ ಮೂಲಕ ಮತ್ತೂಂದು ಬಾರಿ ಮೀಸಲಾತಿ ಪ್ರಕಟಿಸಲಾಗುತ್ತದೆ.
ಆಯೋಗದ ಕೆಲಸವೇನು? :
Laxmi News 24×7