Breaking News

ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್‌ಕುಮಾರ್ ಸ್ಪಷ್ಟನೆ

Spread the love

ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಹೇಳಿದ್ದಾರೆ.

ಅಂತೆಯೇ 10ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆಗೊಳಿಸಲಾಗುವುದು ಎಂಬ ವದಂತಿಗಳು ಸಹ ಹರಿದಾಡುತ್ತಿವೆ. ಆದರೆ ಅದು ಶುದ್ಧ ಸುಳ್ಳು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಿ. ಪರೀಕ್ಷೆಗಳ ಬಗ್ಗೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಬರುವ ಮೇ 3ರ ನಂತರ ದಿನಾಂಕ ಪ್ರಕಟಿಸುವುದಾಗಿ ಸುರೇಶ್ ಕುಮಾರ್ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ