Breaking News

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Spread the love

ಉಡುಪಿ, ಸೆ.15: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಎಸಗಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನ್ನು ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕುಂದಾಪುರದಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಎಫ್‌ಐ ಉಡುಪಿ ಜಿಲ್ಲಾ ಮುಖಂಡ ನವಾಝ್ ಶೇಖ್, ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರಕಾರದ ಪ್ರಯತ್ನವು ಮೂರ್ಖತನವಾಗಿದೆ. ಶಿಕ್ಷಣ ನೀತಿ ವಿರುದ್ಧದ ನಮ್ಮ ಹೋರಾಟವು ಇನ್ನಷ್ಟು ಶಕ್ತಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ಜಿಲ್ಲಾ ಸದಸ್ಯರಾದ ಸಹಾದ ಮತ್ತು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ