ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು.
ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ ತಡೆಗಟ್ಟಲು ಮನೆಯಲ್ಲಿಯೇ ಇರಬೇಕು. ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕೊರೋನಾ ಸೋಂಕಿನ ಬಗ್ಗೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅನಗತ್ಯವಾಗಿ ಯಾರೂ ಹೊರಗಡೆ ಬರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಏನಾದರು ಸಮಸ್ಯೆಗಳಿದ್ದರೆ ಶಾಸಕ ಗಣೇಶ ಹುಕ್ಕೇರಿ ಅಥವಾ ನನಗೆ ತಿಳಿಸಿ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದರು
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಪರಿಶೀಲನೆ
Check Also
ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್ಯಾಂಕ್
Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …