Breaking News

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ಮೀಸಲಾತಿ ನಾಶದ ಹುನ್ನಾರ ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು: ಕಾಂಗ್ರೆಸ್ ಸಭಾತ್ಯಾಗದ ಮಧ್ಯೆಯೂ ಇಂದು ವಿಧಾನಸಭೆಯಲ್ಲಿ ಇಂದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯರ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರಗೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ.

ಸರಣಿ ಟ್ವೀಟ್​​ಗಳನ್ನು ಮಾಡುವ ಮೂಲಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ. ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು..?

  1. ರಾಜ್ಯ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಚುನಾವಣಾ ಆಯೋಗದ ಅಧಿಕಾರವನ್ನು ಕಿತ್ತುಕೊಂಡು ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣಾ ಕ್ಷೇತ್ರಗಳ ಪುನರ್ ವಿಂಗಡನೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ಹೊರಟಿದೆ. ಈ ಕರಾಳ ಶಾಸನವನ್ನು ನಮ್ಮ ಪಕ್ಷ ಬಲವಾಗಿ ವಿರೋಧಿಸುತ್ತದೆ.
  2. ಚುನಾವಣಾ ಆಯೋಗಕ್ಕೆ ನೀಡಿರುವ ಮಾರ್ಗದರ್ಶಿಸೂತ್ರಗಳನ್ನು ನ್ಯಾಯಾಲಯದಲ್ಲಿ ಹಲವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪಿಗಿಂತ ಮೊದಲೇ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ತರಾತುರಿಯಲ್ಲಿ ಅನುಮೋದನೆ ಪಡೆಯಲು ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರುವುದು ಸರಿಯಲ್ಲ.
  3. ಚುನಾವಣಾ ಆಯೋಗವು ಕ್ಷೇತ್ರಗಳ ಮೀಸಲಾತಿ ವಿಂಘಡನೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಅಭಿಪ್ರಾಯ ಸರ್ಕಾರಕ್ಕೆ ಇದ್ದಿದ್ದರೆ ಈ ಹಿಂದೆಯೇ ವಿಧೇಯಕಕ್ಕೆ ತಿದ್ದುಪಡಿ ಮಾಡಬೇಕಿತ್ತು, 2 ವರ್ಷದಿಂದ ಸುಮ್ಮನಿದ್ದು ಚುನಾವಣೆ ಸಮೀಪಿಸುವ ವೇಳೆ ತಿದ್ದುಪಡಿ ಮಾಡಲು ಹೊರಟಿರುವುದರ ಹಿಂದೆ ರಾಜಕೀಯ ಹುನ್ನಾರ ಇದೆ.
  4. ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿಗೆ 1994ರಲ್ಲಿ ಜನತಾ ದಳದ ಸರ್ಕಾರ ಎಂ.ಪಿ.ಪ್ರಕಾಶ್ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಿತ್ತು. ಭೈರೇಗೌಡ, ನಾಣಯ್ಯ ಮತ್ತು ಪಿ.ಜಿ.ಆರ್ ಸಿಂಧ್ಯಾ ಜೊತೆ ನಾನೂ ಸಮಿತಿ ಸದಸ್ಯನಾಗಿದ್ದೆ. ಆ ಸಮಿತಿ ವರದಿ ಆಧಾರದಲ್ಲಿಯೇ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಗಿತ್ತು.
  5. ಮಹಿಳೆಯರಿಗೆ 33% , ಹಿಂದುಳಿದ ಜಾತಿಗಳಿಗೆ 26.4% , ಹಿಂದುಳಿದ ಜಾತಿಗೆ ಸೇರದವರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ 6.6% ಮೀಸಲಾತಿ ನೀಡಬೇಕು ಎಂದು ನಮ್ಮ ಸಮಿತಿ ನೀಡಿದ್ದ ವರದಿಯನ್ನು ಆಧರಿಸಿ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಯಿತು.
  6. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಯಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ನಮ್ಮ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಪರಿಗಣಿಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೂ ಮೀಸಲಾತಿ ನೀಡಲಾಯಿತು.
  7. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದ್ದರು. ಈ ಮೀಸಲಾತಿಯನ್ನು ಬಿಜೆಪಿಯ ರಾಜ್ಯಸಭಾ ಸದಸ್ಯ ದಿವಂಗತ ರಾಮಾ ಜೊಯಿಷ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು.
  8. ಕಾಂಗ್ರೆಸ್ ಪಕ್ಷ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಬೇಕು ಎಂದು ಸಂವಿಧಾನ ತಿದ್ದುಪಡಿ ಮಾಡಿ, ಕಾನೂನು ಜಾರಿ ಮಾಡಿತು. ಇದರಿಂದ ಮಹಿಳೆಯರಿಗೆ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 50% ಮೀಸಲಾತಿ ಸಿಕ್ಕಿದೆ.
  9. ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ. ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ ಸರ್ಕಾರ ತಕ್ಷಣ ಈ ವಿಧೇಯಕವನ್ನು ಕೈಬಿಡಬೇಕು ಎಂದಿದ್ದಾರೆ.

Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ