Breaking News

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

Spread the love

 

ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.

 

ನಂತರ ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಎಲ್ಲ ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ