ಚಿಕ್ಕಮಗಳೂರು: ಫೋನ್‌ನಲ್ಲಿ ಮಾತಾಡಿಕೊಂಡು ಬಂದ ಬೈಕ್ ಸವಾರನ ಎಡವಟ್ಟಿನಿಂದಾಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್ ಸವಾರನ ಕೈಮೇಲೆ ಲಾರಿ ಚಕ್ರ ಹರಿದು ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಏಕಮುಖ ಸಂಚಾರದಲ್ಲಿ ಫೋನ್ ನಲ್ಲಿ ಮಾತನಾಡಿಕೊಂಡು ಬರುತ್ತಿದ್ದ ಬೈಕ್ ಸವಾರ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಮತ್ತೊಂದು ಬೈಕ್ ಸವಾರನ ಕೈಮೇಲೆ ಲಾರಿ ಚಕ್ರ ಹರಿದಿದ್ದು, ಸವಾರ ಸುಂದರ್ ಎಡಗೈಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ, ಕಾಂಗ್ರೆಸ್ ಕಚೇರಿ ಮುಂಭಾಗ ನಡೆದ ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Laxmi News 24×7