Breaking News

ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ

Spread the love

ಮಂಗಳೂರು: ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸ್ತಾ ಇದೀರಾ ನೀವು, ತಾಲಿಬಾನ್ ಸರ್ಕಾರ ಇದ್ಯಾ ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು.

ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅವರ ಮಾತುಗಳು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಪ್ರಯಾಣಿಕರಿಗೆ ಶೀಘ್ರವೇ ಸುಗಮ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ

Spread the loveಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ