ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲ್ಸಾ ಮಾಡುತ್ತಿದ್ದಾರೆ. ಎರಡು ದಿನಗಳ ದಾವಣಗೆರೆ ಸಭೆಯಲ್ಲಿ ಪಕ್ಷದ ವಿಚಾರ ಚಿಂತನೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿಯೇ ಚುನಾವಣೆ ಎಂದೇ ಈಗಾಗಲೇ ಹೇಳಿರುವೆ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.
ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ. ಕಾಂಗ್ರೆಸ್ ನಾಯಕ ದೇವಸ್ಥಾನದ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ದೇವಸ್ಥಾನ ನಿರ್ಮಿಸುತ್ತದೆ. ದೇವಸ್ಥಾನ ಉಳಿಸುವ ಕೆಲ್ಸಾ ಮಾಡುತ್ತಿದೆ. ದೇವಸ್ಥಾನಗಳ ಬಗ್ಗೆ ಸಿದ್ದರಾಮಯ್ಯ ಅವರು ಈಗ ಮಾತಾಡುತ್ತಿದ್ದಾರೆ. ಆದರೆ ಅವರು ಮಸೀದಿಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆ ಅಲ್ವಾ? ಎಂದು ಸಿದ್ದರಾಮಯ್ಯ ಬಗ್ಗೆ ಅರುಣ್ ಸಿಂಗ್ ವ್ಯಂಗ್ಯವಾಡಿದರು.
Laxmi News 24×7