Breaking News

ಕುಡಿದು ವಾಹನ ಚಾಲನೆ ಮಾಡಿದ್ರೆ ಹುಷಾರ್‌. ಪೊಲೀಸರಿಂದ ಸ್ಟ್ರಿಕ್ಟ್‌ ತಪಾಸಣೆ!

Spread the love

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ಇದರಿಂದ ಎಚ್ಚೆತ್ತ ಟ್ರಾಫಿಕ್‌ ಪೊಲೀಸರು ಟಫ್‌ ರೂಲ್ಸ್‌ಗೆ ಮುಂದಾಗಿದ್ದು, ಸ್ಟ್ರಿಕ್ಟ್‌ ಆಗಿ ತಪಾಸಣೆ ನಡೆಸುತ್ತಿದ್ದಾರೆ.

ಒಂದೂವರೆ ವರ್ಷದ ಬಳಿಕ ಮತ್ತೆ ಪೊಲೀಸರು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಆರಂಭಿಸಿದ್ದಾರೆ. ವಾರದಲ್ಲಿ ಮೂರು ದಿನ ಡ್ರಂಕ್‌ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶಿಸಲಾಗಿದೆ.

ವೀಕೆಂಡ್‌ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಲಾಗಿದೆ. ಕುಡಿದು ಕಾರಲ್ಲಿ ಮೋಜು-ಮಸ್ತಿ ಮಾಡಿಕೊಂಡು ಬಂದರೆ ಮುಲಾಜಿಲ್ಲದೇ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಡ್ರಂಕ್‌ ಅಂಡ್ ಡ್ರೈವ್ ಪರೀಕ್ಷೆ ನಡೆಸಲಾಗುತ್ತಿದೆ.

ಈ ಸಂಬಂಧ ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಶುಕ್ರವಾರದಿಂದ ರಾತ್ರಿ 9 ರಿಂದಲೇ ಪೊಲೀಸರು ರಸ್ತೆಗಿಳಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪರೀಕ್ಷೆ ಮಾಡುವ ವಿಧಾನ ಮಾತ್ರ ಹಿಂದಿನಂತಿರುವುದಿಲ್ಲ. ಕುಡಿದು ಬರುವವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು. ಕೊರೊನಾ ಹಿನ್ನೆಲೆ ಆಲ್ಕೋಹಾಲ್ ಬ್ರೀತ್ ಟೆಸ್ಟರ್ ಮೂಲಕ ಪರೀಕ್ಷೆ ಮಾಡುತ್ತಿಲ್ಲ. ಬದಲಿಗೆ ಕುಡಿದು ಬಂದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ