Breaking News

ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

Spread the love

ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, ಇದರಂತೆ ಪವರ್ ಅಫ್ ಅರ್ಟಾನಿ ಮೂಲಕ ಮೂಲ ದಾಖಲಾತಿ ನೀಡಿದ್ದರು.

ಇದೀಗ ಕಂಪೆನಿಯೂ ಮೂರು ಸೈಟ್ ಮಾರಾಟ ಮಾಡಿ 85 ಲಕ್ಷ ರೂಪಾಯಿ ಮಾರಾಟ ಮಾಡಿ 30 ಲಕ್ಷ ಹಣ ನೀಡಿ ಉಳಿದ ಹಣ ಸ್ವಂತ ಬಳಕೆ ಉಪಯೋಗಿಸಿಕೊಂಡು ಹಣ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ನಿವೃತ್ತ ಎಸಿಪಿ ಉಲ್ಲೇಖಿಸಿದ್ದಾರೆ. ಲವಕುಮಾರ್ ನೀಡಿದ ದೂರಿನ ಮೇರೆಗೆ ನಿರ್ಮಾಣ್ ಶೆಲ್ಟರ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮೀನಾರಾಯಣ್, ಕಂಪೆನಿ ಸಿಬ್ಬಂದಿ ಶಶಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಲಕ್ಷ್ಮೀ ನಾರಾಯಣ್ ಇದೇ ರೀತಿ ಸಾಕಷ್ಟು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ