Breaking News

ಪ್ರತಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಯಡಿಯೂರಪ್ಪ ಎಚ್ಚರಿಕೆ

Spread the love

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.

ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಹೇಳಿದ್ದಾರೆ.

ಪಕ್ಷ ಸಂಘಟನೆಗೆ ಯಡಿಯೂರಪ್ಪ ಪ್ರವಾಸಕ್ಕೆ ಒಬ್ಬನೇ ಹೋಗುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಯಡಿಯೂರಪ್ಪ ಪ್ರವಾಸ ಹೊರಟರೇ ಒಬ್ಬನೇ ಹೋಗ್ತಾನೇನು? ನಾನು ಪ್ರವಾಸ ಹೊರಟರೆ ಶಾಸಕರು, ಸಂಸದರು, ಕಾರ್ಯಕರ್ತರು ಎಲ್ಲರೂ ಬರ್ತಾರೆ. ನಾನು ಒಬ್ಬನೇ ಪ್ರವಾಸ ಹೊರಡುವ ಸ್ಥಿತಿ ಬಂದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ. ಹೀಗಾಗಿ ನಮ್ಮ ಸಂಘಟನೆ, ಶ್ರಮ, ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ನಮಗೆ ಕೇಂದ್ರದ ಲೋಕಸಭಾ ಚುನಾವಣೆ ಕಷ್ಟವಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಮುಖಂಡರನ್ನು ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ