ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ, ಇಂದು ಕಾಂಗ್ರೆಸ್ ನಿಂದ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು. ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಅನೇಕ ಕಾಂಗ್ರೆಸ್ ಮುಖಂಡರು ಸೈಕಲ್ ಏರಿ, ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದರು. ಇನ್ನು ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿದರು. ಈ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಮತ್ತಿತರರು ಭಾಗಿಯಾಗಿದ್ದು,ಕಾಂಗ್ರೆಸ್ ನಾಯಕರನ್ನು ಪೊಲೀಸರು ಅರ್ಧದಲ್ಲಿಯೇ ತಡೆದು, ಜಾಥವನ್ನು ಮೊಟುಕುಗೊಳಿಸುವಂತೆ ಮಾಡಿದರು
