Breaking News

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟ

Spread the love

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಗಳು ನಡೆದಿತ್ತು.

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.

ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ಮೇಘನ್ ಎಚ್. ಕೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 530 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆದಿತ್ತು. ಒಟ್ಟು 201834 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಈ ಪೈಕಿ 193447 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ