ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ

Spread the love

ಬೆಂಗಳೂರು: ಸಿಎಂ‌ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದರು.

 

ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅತ್ಯಾಚಾರ ಪ್ರಕರಣದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

 

ಈ ಮೂಲಕ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಘಟನೆಗಳ ಬಗ್ಗೆ ಪ್ರಸ್ತಾಪ ಮಾಡಲು ಬಿಜೆಪಿ ನಿರ್ಧರಿಸಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿನ ಕಾನೂನು ವೈಫಲ್ಯಗಳನ್ನ ಹೇಳುವ ಮೂಲಕ ಕಾಂಗ್ರೆಸ್​ಗೆ ತಿರುಗೇಟು ನೀಡಲು ಚರ್ಚಿಸಲಾಗಿದೆ.

 

ಪ್ರಕರಣದ ಬಗ್ಗೆ ಸಮರ್ಥ ವಿವರಗಳೊಂದಿಗೆ ಉತ್ತರಿಸಲು ಸೂಚನೆ ನೀಡಲಾಗಿದ್ಯಂತೆ. ಸಚಿವರುಗಳು ಉತ್ತರ ಕೊಡುವ ವೇಳೆ ವಿಪಕ್ಷಗಳು ದಾಳಿ ಮಾಡಿದ್ರೆ, ಆಗ ಸಚಿವರ ಜೊತೆ ಶಾಸಕರೂ ನಿಲ್ಲುವಂತೆ ಸೂಚನೆ ನೀಡಲಾಗಿದೆ. ಇನ್ನ ಇಲಾಖೆಗಳ ಪ್ರಗತಿ, ಜಿಲ್ಲೆಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಮರ್ಥವಾಗಿ ಅರಿತು, ಉತ್ತರ ನೀಡುವ ಬಗ್ಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Spread the loveರಾಮನಗರ: ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್‌ಗೆ ಬಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ