Breaking News

ಮಗಳ ಹುಟ್ಟುಹಬ್ಬಕ್ಕೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ ತಂದೆ

Spread the love

ಹುಬ್ಬಳ್ಳಿ: ಮಗಳ ಹುಟ್ಟುಹಬ್ಬವನ್ನು ವಿನೂತನವಾಗಿ ಅಚರಿಸಿದ ತಂದೆ, ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ್ದಾರೆ.

ನಗರದ ಯುವ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ತಮ್ಮ ಮಗಳು ಅಶ್ವಿಕಾಮಾನ್ಯಾ ಹೆಬಸೂರ ಎರಡನೇ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ಇದರ ಅಂಗವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ವಿತರಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಇರುವುದರಿಂದ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು ಸಂಭವಿಸುತ್ತವೆ. ಹೀಗಾಗಿ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಜಾಗೃತಿ ಮೂಡಿಸಿದ್ದಾರೆ.

ನಗರದ ಚೆನ್ನಮ್ಮ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುವ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದರು. ಕಳೆದ ವರ್ಷ ಕೂಡ ಇಪ್ಪತ್ತೈದು ಹೆಲ್ಮೆಟ್ ನೀಡಲಾಗಿತ್ತು. ಈ ವರ್ಷ ಕೂಡ ಇಪ್ಪತ್ತೈದು ಹೆಲ್ಮೆಟ್ ಸಾರ್ವಜನಿಕರಿಗೆ ವಿತರಿಸುವ ಮೂಲಕ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ ಹಾಗೂ ಸುಪ್ರಿಯಾ ಹೆಬಸೂರ, ಲಿಂಗರಾಜ ಪಾಟೀಲ್, ಬಸವರಾಜ್ ಕುಂದಗೋಳಮಠ, ಸಂಚಾರಿ ಇನ್ಸ್‌ಪೆಕ್ಟರ್‌ ಎಸ್ ವಿ ಕಾಡದೇವರಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ