ಪಿ ವಿ ಸಿಂಧು ಎದುರು ದೀಪಿಕಾ ಪಡುಕೋಣೆ ಬ್ಯಾಡ್ಮಿಂಟನ್ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಪಿವಿ ಸಿಂಧು ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿರುವ ಆಟಗಾರ್ತಿ. ಇವರ ಜೊತೆ ನಟಿ ದೀಪಿಕಾ ಬ್ಯಾಡ್ಮಿಂಟನ್ ಆಡಿರುವುದು ವಿಶೇಷವಾಗಿದೆ.
ಇನ್ನು ಸಿಂಧು ಜೊತೆ ಆಟವಾಡಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಶೇರ್ ಮಾಡಿಕೊಂಡಿದ್ದಾರೆ. ಇದು ನನ್ನ ನಿತ್ಯ ಜೀವನ.. ಕ್ಯಾಲೊರಿಯನ್ನು ಬರ್ನ್ ಮಾಡಲು ಸಿಂಧು ಜೊತೆ ಬ್ಯಾಡ್ಮಿಂಟನ್ ಆಟವಾಡಿದೆ ಎಂದಿದ್ದಾರೆ. ಇದಕ್ಕೆ ಕಮೆಂಟ್ ಮಾಡಿದ ಸಿಂಧು ಎಷ್ಟು ಕ್ಯಾಲರಿ ಬರ್ನ್ ಆಯಿತು ಎಂದಿದ್ದಾರೆ.
ಇನ್ನು ಸಿಂಧು ಪದಕ ಗೆದ್ದ ಹಿನ್ನೆಲೆಯಲ್ಲಿ ದೀಪಿಕಾ ಔತಣ ಕೂಟವನ್ನು ಏರ್ಪಡಿಸಿದ್ದರು. ಇತ್ತೀಚೆಗೆ ಸಿಂಧು ಮತ್ತು ದೀಪಿಕಾ ಹೆಚ್ಚಾಗಿ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Laxmi News 24×7