ನವ ದೆಹಲಿ : ಭಾರತದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 26,964 ಹೊಸ ಪ್ರಕರಣಗಳು ಪತ್ತೆಯಾಗಿದ್ದು 383 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆಪ್ಟೆಂಬರ್ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 383 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಒಟ್ಟು 4,45,768 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಇದೆ ಅವಧಿಯಲ್ಲಿ 34,167 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇದರೊಂದಿಗೆ ಒಟ್ಟು 3,27,83,741 ಮಂದಿ ಗುಣಮುಖರಾಗಿದ್ದಾರೆ.
Laxmi News 24×7