Breaking News

ನಿಪ್ಪಾಣಿ ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

Spread the love

 

ನಿಪ್ಪಾಣಿ: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಮಾರಟದ ಖಚಿತ ಮಾಹಿತಿ ಆಧಾರದ ಮೇಲೆ ವೃತ್ತ ನಿರೀಕ್ಷಕ ಸಂಗಮೇಶ ಶಿವಯೋಗಿ, ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸೂರ ನೇತೃತ್ವದಲ್ಲಿ ಶೇಖರ ಅಸೋದೆ, ಉದಯ ಕಾಂಬಳೆ, ಮೊದಲಾದ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿ ಕುರಿತು ನಿಪ್ಪಾಣಿ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ