Breaking News

ಕೌಟುಂಬಿಕ ಕಲಹ – ಪತ್ನಿ, ಮಗಳನ್ನೇ ಕೊಲೆ ಮಾಡಿದ ಪಾಪಿ ತಂದೆ!

Spread the love

ಸೇಡಂ : ಪತ್ನಿ ಹಾಗೂ ಮಗಳನ್ನು ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿಯ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.

ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರಗಿಯ ನಿವಾಸಿಯಾಗಿದ್ದ ದಿಗಂಬರ ಹನುಮಂತಪ್ಪ ಗಾಂಜಲಿ(47) ಕೊಲೆ ಮಾಡಿರುವ ಆರೋಪಿ. ಈ ಪಾಪಿ ಪತ್ನಿ ಜಗದೇವಿ(35) ಹಾಗೂ ಮಗಳು ಪ್ರಿಯಾಂಕಾ(11) ಕೊಲೆ ಮಾಡಿದ್ದಾನೆ.

ಕೆಲವು ತಿಂಗಳ ಹಿಂದೆಯಷ್ಟೇ ಕಲಬುರಗಿಯಿಂದ ಈ ಕುಟುಂಬ ಪಟ್ಟಣಕ್ಕೆ ಬಂದು ನೆಲೆಸಿತ್ತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸದ್ಯ ಕೊಲೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಸೇಡಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ