Breaking News

35 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Spread the love

ಜನವಾಡ: ಅರಳು ಸ್ವಯಂ ಸೇವಾ ಸಂಸ್ಥೆಯು ಆಶಾ ಫಾರ್ ಎಜುಕೇಷನ್ ಸಂಸ್ಥೆ ನೆರವಿನಡಿ ಬೀದರ್‍ನ ನಾವದಗೇರಿ, ಕಮಠಾಣ, ಯದಲಾಪುರ ಹಾಗೂ ಕಾಪಲಾಪುರ ಗ್ರಾಮಗಳ 35 ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ಕಿಟ್ ವಿತರಿಸಿತು.

ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಹಿಂದುಗಡೆಯ ಸಂಸ್ಥೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅರಳು ಸಂಸ್ಥೆ ನಿರ್ದೇಶಕ ಡಾ. ಕೆ.ಟಿ. ಮೆರಿಲ್ ಅವರು, ಕೋವಿಡ್ ಪ್ರಯುಕ್ತ ತಲಾ ಐದು ಕೆ.ಜಿ ಅಕ್ಕಿ, ಜೋಳ, 2 ಕೆ.ಜಿ. ರವೆ, 1 ಕೆ.ಜಿ. ಸಿಹಿ ಎಣ್ಣೆ, 1 ಕೆ.ಜಿ. ತೊಗರಿ ಬೇಳೆ, 1 ಕೆ.ಜಿ. ಚಣಗಿ ಬೇಳೆ ಒಳಗೊಂಡ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು.

ಆಶಾ ಫಾರ್ ಎಜುಕೇಷನ್ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಾಪಿಸಿದ ಸಂಸ್ಥೆಯಾಗಿದೆ. ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತವಾಗಿದೆ. ಸಂಸ್ಥೆ ನೆರವಿನಡಿ ಈಗಾಗಲೇ 50 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ. ಬರುವ ದಿನಗಳಲ್ಲಿ ಇನ್ನೂ 150 ಬಡ ಕುಟುಂಬಗಳಿಗೆ ಕಿಟ್ ವಿತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಎರಡನೇ ಅಲೆ ಜಿಲ್ಲೆಯಲ್ಲಿ ಬಹುತೇಕ ನಿಯಂತ್ರಣಕ್ಕೆ ಬಂದಿದೆ. ಆದರೂ, ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆದು ಜಿಲ್ಲೆಯನ್ನು ಕೋವಿಡ್‍ಮುಕ್ತಗೊಳಿಸಲು ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಅರಳು ಸಂಸ್ಥೆ ಕಾರ್ಯಕ್ರಮ ನಿರ್ದೇಶಕಿ ಸುನಿತಾ, ಸ್ವಯಂ ಸೇವಕರಾದ ಸುರೇಕಲಾ ಕಮಠಾಣ, ಯೋಹಾನ್ ಬೀದರ್ ಇದ್ದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ