Breaking News

ಮಾಜಿ ಸಿಎಂ ಬಿ.ಎಸ್.​​ ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

Spread the love

ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ‌, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ ಸಮಿತಿ ರಚನೆ ಮಾಡಲಾಗಿತ್ತು.

ಪ್ರಪ್ರಥಮ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರು ಜಂಟಿ ಅಧಿವೇಶನ ಅಧ್ಯಕ್ಷತೆ ವಹಿಸಿದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶಸ್ತಿ ಘೋಷಣೆ ಮಾಡಿದರು. ಎದ್ದು ನಿಂತು ನಮಸ್ಕರಿಸಿದ ಮಾಜಿ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು, ಸ್ಪೀಕರ್ ಪೀಠದ ವೇದಿಕೆಗೆ ಆಗಮಿಸಿ ಅತ್ಯುತ್ತಮ ಶಾಸಕ ಪ್ರಶಸ್ತಿ ಸ್ವೀಕಾರ ಮಾಡಿದರು. ಈ ವೇಳೆ ಸದಸ್ಯರು ಮೇಜು ಕುಟ್ಟಿ ಹರ್ಷ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ