ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ.
ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು ಕರೆದಿದ್ದರು. ಗುರುವಾರ ರಾತ್ರಿ ಮಾತುಕತೆ ನಡೆದ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಹೊಡೆದಾಡುವ ವೇಳೆ ಗುರುರಾಜ ಮೇಲೆ ಪವನ್ ಕಲ್ಲಿನಿಂದ ಹಲ್ಲೆ ಮಾಡಿದ. ತೀವ್ರ ರಕ್ತಸ್ರಾವದಿಂದ ಗುರುರಾಜ ಸ್ಥಳದಲ್ಲೇ ಮೃತಪಟ್ಟರು’ ಎಂದು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Laxmi News 24×7