Breaking News

ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

Spread the love

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.

ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ 3.30 ರಿಂದ 4.30ರವರೆಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ಅ.08 ರ ಬೆಳಗ್ಗೆ 11.50ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿಗಳ ಪ್ರವಾಸ ಪಟ್ಟಿಯನ್ನು ರಾಷ್ಟ್ರಪತಿಗಳ ಆಪ್ತ ಕಾರ್ಯದರ್ಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಾನಿಸಿದ್ದಾರೆ.


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ