Breaking News

ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಕೀರ್ ಅಹ್ಮದ್ ಗೆ 583ನೇ ರ್ಯಾಂಕ್

Spread the love

ಬೆಳಗಾವಿ: ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರಾಮಾಪುರಸೈಟ್ ಗ್ರಾಮದ ಶಾಕೀರ್ ಅಹ್ಮದ್ 583ನೇ ರ್ಯಾಂಕ್ ಪಡೆದಿದ್ದಾರೆ.

ಶಾಕೀರ್ ಅಹ್ಮದ್ ಅವರು 2014ರಲ್ಲಿ ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದರು. ಮತ್ತೆ 2015ರಲ್ಲಿ ಕೆಪಿಎಸ್‌ ಸಿ ಪರೀಕ್ಷೆ ಬರೆದು ಹೆಚ್ಚಿನ ಅಂಕದೊಂದಿಗೆ ತೇರ್ಗಡೆಯಾಗಿ ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಯುಪಿಎಸ್ ಸಿ ಪರೀಕ್ಷೆ ತೇರ್ಗಡೆಯಾಗಲು ಹಗಲು ರಾತ್ರಿ ಎನ್ನದೇ ಸಾಕಷ್ಟು ಜನ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಶಾಕೀರ್ ಅಹ್ಮದ್ ಅವರು ಸರ್ಕಾರಿ ಅಧಿಕಾರಿಯಾಗಿ ಕೆಲಸದಲ್ಲಿದ್ದುಕೊಂಡೇ ಓದಿ ಯುಪಿಎಸ್‌ ಸಿ ಪರೀಕ್ಷೆ ತೇರ್ಗಡೆಯಾಗಿದ್ದಾರೆ. ಶಾಕೀರ್ ಅವರ ತಂದೆ ಅಕ್ಬರ್ ಸಾಬ್ ತೋಂಡಿಖಾನ್ ಅವರು ಕೃಷಿ ಇಲಾಖೆಯ ನಿವೃತ್ತ ನೌಕರರಾಗಿದ್ದಾರೆ.


Spread the love

About Laxminews 24x7

Check Also

15 ದಿನದ ಮಗುವಿಗೆ ತಂದೆ ವಿಷಪ್ರಾಶನ ?: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ತಾಯಿ

Spread the loveಬೆಳಗಾವಿ: ಪ್ರಪಂಚವನ್ನೇ ಕಾಣದ 15 ದಿನದ ಮಗುವಿಗೆ ಪಾಪಿ ತಂದಯೇ ವಿಷಪ್ರಾಶನ ಮಾಡಿದ್ದಾನೆ ಎಂದು ಹೆತ್ತ ತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ