ಬೆಳಗಾವಿ: ಕುಂದಾ ನಗರಿ ಬೆಳಗಾವಿ ಜಿಲ್ಲೆಯ ಎರಡು ದಿನಗಳ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.
ಇಲ್ಲಿನ ಟಿಳಕವಾಡಿಯಲ್ಲಿ ವಿಶೇಷಚೇತನ ಮಕ್ಕಳಿಗಾಗಿ ವಿನೂತನವಾಗಿ ನಿರ್ಮಿಸಲಾಗಿರುವ ಮಹಾತ್ಮ ಫುಲೆ ಉದ್ಯಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಉಮೇಶ್ ಕತ್ತಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ, ಮಹಾದೇವಪ್ಪ ಯಾದವಾಡ ಮತ್ತಿತರರು ಉಪಸ್ಥಿತರಿದ್ದರು.
Laxmi News 24×7