ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಹೈಕಮಾಂಡ್ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ.
ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ.
ಪಂಜಾಬ್ ಪ್ರವಾಸದಲ್ಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.
ಕೆಪಿಸಿಸಿ ಪದಾಧಿಕಾರಿಗಳa ಪಟ್ಟಿ, ಹಿಂದುಳಿದ, ಅಲ್ಪಸಂಖ್ಯಾಕ, ಮಹಿಳಾ, ಎಸ್‌ಸಿ ವಿಭಾಗಗಳ ಅಧ್ಯಕ್ಷರ ನೇಮಕ ಸಂಬಂಧವೂ ಡಿ.ಕೆ.ಶಿವಕುಮಾರ್ ಚರ್ಚಿಸಿ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
Laxmi News 24×7