ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಜಗದೀಶ ಶೆಟ್ಟರ್ ಅವರು, ಮಂಗಳವಾರ ವೀಕ್ಷಿಸಿದರು.
ಉಣಕಲ್ ಕೆರೆ, ಮಾರುಕಟ್ಟೆ ಹಾಗೂ ತೋಳನಕೆರೆಗೆ ಭೇಟಿ ನೀಡಿದ ಶೆಟ್ಟರ್, ಕಾಮಗಾರಿ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್, ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ, ಬಿಜೆಪಿ ಮುಖಂಡ ಮಹೇಶ ಬುರ್ಲಿ ಹಾಗೂ ಇತರರು ಇದ್ದರು.
Laxmi News 24×7