Breaking News

ಲಂಚ ಪಡೆಯುವಾಗಲೇ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕುಂದಗೋಳ ಅಧಿಕಾರಿ

Spread the love

ಕುಂದಗೋಳ: ರೈತರೊಬ್ಬರ ಬಳಿ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾದ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕುಂದಗೋಳ ಪಟ್ಟಣದ ಕಂದಾಯ ನಿರೀಕ್ಷಕ ಶಿವಾನಂದ ಬೆಮಣ್ಣವರ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ರೈತನ ಹೊಸ ಪಾಣಿಯನ್ನ ಮಾಡಿಕೊಡಲು ಅಧಿಕಾರಿ 35 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅನ್ನೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ರೈತ ಎಸಿಬಿ ಪೊಲೀಸರಿಗೆ ಅಧಿಕಾರಿ ವಿರುದ್ಧ ದೂರು ನೀಡಿದ್ದರಂತೆ. ಇಂದು ಕಚೇರಿಯಲ್ಲಿ ರೈತನಿಂದ ಅಧಿಕಾರಿ ಹಣ ಪಡೆಯುತ್ತಿದ್ದಾಗ ಎಸಿಬಿ ಪೊಲೀಸರಿಗೆ ರೆಡ್​​ಹ್ಯಾಂಡ್​​ಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಇನ್ನು, ಡಿವೈಎಸ್ಪಿ ವೇಣುಗೋಪಾಲ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಂಚ ಸ್ವೀಕರಿಸುತ್ತಾ ಕುಂದಗೋಳ ಪಟ್ಟಣದ ಕಂದಾಯ ನಿರೀಕ್ಷಕ ಶಿವಾನಂದ ಬೆಮಣ್ಣವರ ಬಲೆಗೆ ಬಿದ್ದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ