Breaking News

ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್.​..!

Spread the love

ಆರ್​​ಎಸ್​ಎಸ್​ನದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಭರ್ಜರಿ ಟಾಂಗ್​ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು.

ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್​ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ ಪ್ರಶಾಂತ್​ ಪೂಜಾರಿ, ಶರತ್​ ಮಡಿವಾಳ, ದೀಪಕ್​ ರಾವ್​, ಮಡಿಕೇರಿ ಕುಟ್ಟಪ್ಪ ಎಲ್ಲರೂ ಸಿದ್ದರಾಮಯ್ಯ ಆಡಳಿತಾವಧಿಯಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ರು.

ಎಟಿಎಂ ಒಳಗೆ ಹೋದ ಮಹಿಳೆಯ ಮೇಲೆ ಹಲ್ಲೆಯಾಯ್ತು. ಸುಳ್ಯದಲ್ಲಿ ಕಾಲೇಜಿಗೆ ಹೋದ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಯ್ತು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯ ಆಡಳಿತ ತಾಲಿಬಾನ್​ ಆಡಳಿತವಾಗಿದೆ. ಇದೇ ಕಾರಣಕ್ಕೆ ನಾನು ಸಿದ್ದರಾಮಯ್ಯರನ್ನು ಭಯೋತ್ಪಾದಕ ಎಂದು ಕರೆಯುತ್ತೇನೆ. ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದಲ್ಲಿ ಪ್ರತಿ ದಿನ ಕೊಲೆ, ಸುಲಿಗೆಗಳು ನಡೆಯುತ್ತಿದ್ದವು ಎಂದು ಕಿಡಿ ಕಾರಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ