Breaking News

ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆ 13 ಸಾವು; 560ಕ್ಕೂ ಹೆಚ್ಚು ಮಂದಿಯ ರಕ್ಷಣೆ

Spread the love

ಮುಂಬೈ: ಗುಲಾಬ್​ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದ ಹಲವೆಡೆ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ. ಮರಾಠವಾಡ, ಮಹಾರಾಷ್ಟ್ರದ ಉತ್ತರ ಭಾಗಗಳಲ್ಲಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಎನ್​ಡಿಆರ್​ಎಫ್ ಪಡೆ ಸಂಕಷ್ಟದಲ್ಲಿ ಸಿಲುಕಿದ್ದ 560 ಮಂದಿಯನ್ನ ರಕ್ಷಣೆ ಮಾಡಿದೆ. 200ಕ್ಕೂ ಹೆಚ್ಚು ರಾಸುಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಕೆಲವು ಮನೆಗಳಿಗೂ ಹಾನಿಯಾಗಿದೆ.

ಭಾರೀ ಮಳೆ ಹಿನ್ನೆಲೆ ಸಭೆ ನಡೆಸಿದ ಸಿಎಂ ಉದ್ಧವ್​ ಠಾಕ್ರೆ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. ಇನ್ನು ಹವಾಮಾನ ಇಲಾಖೆ ಕೂಡ ಮುಂದಿನ 24 ಗಂಟೆಯಲ್ಲಿ ಭಾರೀ ಮೆಯಾಗುವ ಮುನ್ಸೂಚನೆಯನ್ನ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ