Breaking News

ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!

Spread the love

ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್​ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ.

ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ.

ಸೋಂಕಿತರಿಗೆ ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಒಂದು ವಾರ ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ