Breaking News

ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

Spread the love

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗುರುವಾರ ಬೆಳಗ್ಗೆ ದೊಡ್ಡಬೆಲೆ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ತಮ್ಮ ನಿವಾಸದಲ್ಲೇ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದೆ. ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್​ನಲ್ಲಿ ಬರೆದಿರುವ ಡೆತ್​ನೋಟ್​ 4 ಪುಟ ಇದೆ.

ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು, ಫನ್​ ಚಿತ್ರಗಳಲ್ಲೂ ಬಣ್ಣ ಹಚ್ಚಿದ್ದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ